
ಚಳಿಗಾಲದಲ್ಲಿ ಖರ್ಜೂರದ ಸೇವನೆ ಉತ್ತಮ ಎನ್ನಲಾಗುತ್ತದೆ. ಇದು ನಮ್ಮ ಮೂಳೆಗಳನ್ನು ಬಲಪಡಿಸುವುದರ ಜೊತೆಗೆ ದೇಹಕ್ಕೆ ಶಕ್ತಿ ನೀಡುತ್ತದೆ. ಖರ್ಜೂರವು ಒಂದು ಆರೋಗ್ಯಕರ ಡ್ರೈ ಫ್ರೂಟ್ ಆಗಿದೆ. ಅದರಲ್ಲೂ ಚಳಿಗಾಲದಲ್ಲಿ ಖರ್ಜೂರದ ಸೇವನೆ ಆರೋಗ್ಯವನ್ನು ಫಿಟ್ ಆಗಿಡಲು ಸಹಕಾರಿಯಾಗಿದೆ. ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣ, ಮೆಗ್ನೀಸಿಯಮ್ ಮತ್ತು ರಂಜಕದಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಖರ್ಜೂರ ಸೇವನೆಯಿಂದ ಯಾವೆಲ್ಲಾ ಆರೋಗ್ಯ ಪ್ರಯೋಜನಗಳಿವೆ, ದಿನಕ್ಕೆ ಎಷ್ಟು ಖರ್ಜೂರ ತಿನ್ನೋದು ಉತ್ತಮ ಎನ್ನುವುದನ್ನು ತಿಳಿಯೋಣ.

ಫೈಬರ್‌ನಲ್ಲಿ ಸಮೃದ್ಧವಾಗಿರುವ ಖರ್ಜೂರವು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕರುಳಿನ ಚಲನೆಯನ್ನು ಕ್ರಮಬದ್ಧಗೊಳಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ. ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ, ಪೋಷಕಾಂಶಗಳ ಉತ್ತಮ ಹೀರಿಕೊಳ್ಳುವಿಕೆಗೆ ಸಹಾಯ ಮಾಡುತ್ತದೆ, ಆದರೆ ಕರಗದ ನಾರು ಕರುಳಿನ ಮೂಲಕ ಆಹಾರವನ್ನು ವೇಗವಾಗಿ ಚಲಿಸಲು ಸಹಾಯ ಮಾಡುತ್ತದೆ.








