
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.) ವತಿಯಿಂದ ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಏಪ್ರಿಲ್ 24ರಂದು ರಾಜಧಾನಿಯ ಟೌನ್ ಹಾಲ್ನಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ವಿವರಗಳು:
- ದಿನಾಂಕ: 24-04-2026, ಶುಕ್ರವಾರ
- ಸಮಯ: ಬೆಳಿಗ್ಗೆ 11:00 ಗಂಟೆಗೆ
- ಸ್ಥಳ: ಟೌನ್ ಹಾಲ್, ಜೆ.ಸಿ. ರಸ್ತೆ, ಬೆಂಗಳೂರು.
ದಿವ್ಯ ಸಾನ್ನಿಧ್ಯ:
ಕಾರ್ಯಕ್ರಮವು ಪರಮಪೂಜ್ಯ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳವರ (ಮೇಲುಗಾವಿ ವೀರಸಿಂಹಾಸನ ಸಂಸ್ಥಾನ ಮಠ, ಶಿವಗಂಗಾ) ಹಾಗೂ ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳವರ (ಚಂದ್ರವನ ಆಶ್ರಮ, ಬೇಬಿಮಠ, ಶ್ರೀರಂಗಪಟ್ಟಣ) ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿದೆ.
ಉದ್ಘಾಟನೆ ಮತ್ತು ಅಧ್ಯಕ್ಷತೆ:
ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಜಗದೀಶ ಶೆಟ್ಟರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಹಾಸಭಾದ ಅಧ್ಯಕ್ಷರು ಹಾಗೂ ಅರಣ್ಯ ಮತ್ತು ಪರಿಸರ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳು:
ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಅವರು ಪದಗ್ರಹಣ ನೆರವೇರಿಸಲಿದ್ದಾರೆ. ಆಶಯ ನುಡಿಗಳನ್ನು ಕೆ.ಪಿ.ಎಸ್.ಸಿ (ನಿ.) ಅಧ್ಯಕ್ಷರಾದ ಶ್ರೀ ಶಂಕರ ಬಿದರಿ ಅವರು ಆಡಲಿದ್ದಾರೆ.
ಸಮಾರಂಭದಲ್ಲಿ ಕೇಂದ್ರ ಸಚಿವರಾದ ಶ್ರೀ ವಿ. ಸೋಮಣ್ಣ, ರಾಜ್ಯ ಸಚಿವರಾದ ಎಂ.ಬಿ. ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ, ಶಿವಾನಂದ ಪಾಟೀಲ, ಶರಣಪ್ರಕಾಶ ಪಾಟೀಲ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ಶಾಸಕರು, ಸಂಸದರು ಮತ್ತು ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ.
ಸಂದೇಶ:
“ಶರಣರ ಬರವೆಮಗೆ ಪ್ರಾಣ ಜೀವಾಳವಯ್ಯಾ” ಎಂಬ ಆಶಯದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ನಾಡಿನ ಹರ-ಗುರು-ಚರಮೂರ್ತಿಗಳು, ಸಮಾಜದ ಬಾಂಧವರು ಹಾಗೂ ಮಹಿಳಾ ಮತ್ತು ಯುವ ಘಟಕದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ವೀಣಾ ಕಾಶಪ್ಪನವರ ಹಾಗೂ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾದ ಶ್ರೀ ವೆಂಕಟರೆಡ್ಡಿ ಪಾಟೀಲ್ ಅವರು ಕೋರಿದ್ದಾರೆ.
ವರದಿ: ಸ್ಪರ್ಧಾ ನ್ಯೂಸ್ ನೆಟ್ವರ್ಕ್, ಬೆಂಗಳೂರು.






