“ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್(ರಿ)ನ ಹಾವೇರಿ ಜಿಲ್ಲಾಧ್ಯಕ್ಷರಾಗಿ ಸಾಹಿತಿ ಶೇಖರ ಭಜಂತ್ರಿ ನೇಮಕ”

ಹಾವೇರಿ: ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ಸಾಹಿತಿಗಳಾದ ಶೇಖರ ಭಜಂತ್ರಿ ಯವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ (ರಿ) ಬೆಂಗಳೂರು, ಇದರ ಹಾವೇರಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪರಿಷತ್ತಿನ ಮಹಾ ಪೋಷಕರಾದ ಮಲ್ಲಿಕಾರ್ಜುನ ತೊದಲಬಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪರ್ವೀನಬಾನು ಬುಳ್ಳಣ್ಣವರ ಹಾಗೂ ರಾಜ್ಯ ಗೌರವಾಧ್ಯಕ್ಷ ಎಲ್.ಐ.ಲಕ್ಕಮ್ಮನವರ ಶಿಫಾರಸ್ಸಿನೊಂದಿಗೆ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಶ್ರೀಮತಿ.ರಮಾ ಆರ್. ರವರು ಶೇಖರ ಭಜಂತ್ರಿ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಅನುಗುಣವಾಗಿ ಎಲ್ಲಾ ತಾಲ್ಲೂಕು ಘಟಕಗಳ ರಚನೆ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಸಾಹಿತ್ತಿಕ ಕಾರ್ಯಕ್ರಮಗಳನ್ನ ಯಶಸ್ವಿಯಾಗಿ ಸಂಘಟಿಸಿ ಉತ್ತಮ ಸಾಧನೆ ಮಾಡುವ ಮೂಲಕ ಪರಿಷತ್ತನ್ನು ಬಲಗೊಳಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ.ಶೇಖರ ಭಜಂತ್ರಿ ಯವರು ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಕ್ರಿಯಾಶೀಲರಾಗಿ ಸೇವೆ ಸಲ್ಲಿಸುತ್ತಿದ್ದು, ಹಲವು ಸಂಘಟನೆಗಳ ಜೊತೆ ಗುರುತಿಸಿಕೊಂಡಿದ್ದಾರೆ.ವಿವಿಧ ಪದಾಧಿಕಾರಿ ಜವಾಬ್ದಾರಿಯಿಂದ ಉತ್ತಮವಾಗಿ ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸುವ ಜೊತೆಗೆ ಬರವಣಿಗೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಹಾವೇರಿ ಜಿಲ್ಲಾ ಸಂಚಾಲಕ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸಂಚಾಲಕ, ಜಿಲ್ಲಾ ಬಿ.ಜಿ.ವಿ.ಎಸ್.ನ ಉಪಾಧ್ಯಕ್ಷ, ಭಾವಸಂಗಮ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಸೇರಿದಂತೆ ಸೃಜನಶೀಲ ಉಪನ್ಯಾಸಕರ ವೇದಿಕೆಯ ಗೌರವ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ಇವರ ಶೈಕ್ಷಣಿಕ, ಸಾಹಿತ್ತಿಕ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ಸದರಿಯವರ ನೇಮಕದಿಂದ ಜಿಲ್ಲೆಯ ಸಾಹಿತಿಗಳ ಬಳಗ ಮತ್ತು ಸಾಹಿತ್ಯ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು ಪರಿಷತ್ ವತಿಯಿಂದ ಜಿಲ್ಲೆಯಲ್ಲಿ ಉತ್ತಮ ಸಾಹಿತ್ಯಕ ಮತ್ತು ಸಾಂಸ್ಕೃತಿಕ ವಾತಾವರಣ ನಿರ್ಮಾಣವಾಗಲೆಂದು ಶುಭ ಹಾರೈಸಿದಾರೆ.

www.spardhanews.in